222
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಎಂಟು ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದರು
ಸಿಎಂ ಹಾಗೂ ಡಿಸಿಎಂ ಪ್ರಮಾಣ ವಚನದ ಬಳಿಕ ಕೊರಟಗೆರೆ ಕ್ಷೇತ್ರದ ಶಾಸಕ ಜಿ ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು ಬಳಿಕ ಮುನಿಯಪ್ಪ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು ನಂತರ ಶಾಸಕ ಎಂ ಬಿ ಪಾಟೀಲ್ ಹಾಗೂ ಸತೀಶ್ ಜಾರಕಿಹೊಳಿ ಪ್ರಮಾಣ ವಚನ ಸ್ವೀಕರಿಸಿದರೆ ಶಾಸಕ ಪ್ರಿಯಾಂಕ್ ಖರ್ಗೆ ಹಾಗೂ ರಾಮಲಿಂಗ ರೆಡ್ಡಿ ಮತ್ತು ಕೊನೆಯಲ್ಲಿ ಚಾಮರಾಜಪೇಟೆಯಿಂದ ಆಯ್ಕೆಯಾದ ಜಮೀರ್ ಅಹ್ಮದ್ ಖಾನ್ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು

