229
ಉಡುಪಿ : ಬಿಜೆಪಿ ಉಡುಪಿ ಜಿಲ್ಲೆ ಇದರ ನೂತನ ಜಿಲ್ಲಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಕಿಶೋರ್ ಕುಮಾರ್ ಕುಂದಾಪುರ ಇವರು ಜನವರಿ 22 ರಂದು ಸೋಮವಾರ ಮಧ್ಯಾಹ್ನ ಗಂಟೆ 3.00 ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಮತ್ತು ಪಕ್ಷದ ಹಿತೈಷಿಗಳು ಉಪಸ್ಥಿತರಿರಬೇಕಾಗಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

