110
ಕುಂದಾಪುರ : ಹಳೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಕೋಮು ಸಂಘರ್ಷಕ್ಕೆ ಪ್ರಚೋದಿಸಿದ್ದಾರೆ ಎಂದು ಆರೋಪಿಸಿ ರಾಘವೇಂದ್ರ ಕಾಂಚನ್ ಬಾರಿಕೆರೆಯನ್ನು ಕೋಟ ಠಾಣಾ ಪೊಲೀಸರು ಬಂಧಿಸಿದ್ದಾರೆ. 2021 ರಲ್ಲಿ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ರಿಯಾಜ್ ಫರಂಗಿಪೇಟೆ ಎಂಬವರ ಹಳೆ ವಿಡಿಯೋವನ್ನು ಶೇರ್ ಮಾಡಿದ್ದಾರೆ.
ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರನ್ನು ಕಾರ್ಕಳ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿದ್ದು, ಆರೋಪಿ ಪರ ಹಾಜರಿದ್ದ ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರು ಮಧ್ಯಂತರ ಜಾಮೀನು ನೀಡಲು ನಿರಾಕರಿಸಿ, ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಆರೋಪಿಯನ್ನು ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ.

