Home » ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ : ಆರೋಪಿ ವಶಕ್ಕೆ
 

ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ : ಆರೋಪಿ ವಶಕ್ಕೆ

by Kundapur Xpress
Spread the love

ಕೋಟ: ಪಾಂಡೇಶ್ವರದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಬಳಿ, ಸಾರ್ವಜನಿಕ ಸ್ಥಳದಲ್ಲಿ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸ್ ಠಾಣಾ ಸಿಬ್ಬಂದಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.ಪೊಲೀಸ್ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ, World Cup T-20 ಪಂದ್ಯಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರನ್ನು ಒಟ್ಟುಗೂಡಿಸಿಕೊಂಡು ಹಣ ಸಂಗ್ರಹಿಸಿ, ಮೊಬೈಲ್ ಫೋನ್ ಮೂಲಕ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ದಾಳಿ ವೇಳೆ ಬೆಟ್ಟಿಂಗ್ ಆಡುತ್ತಿದ್ದ ಸಾರ್ವಜನಿಕರು ಸ್ಥಳದಿಂದ ಪರಾರಿಯಾಗಿದ್ದು, ಬೆಟ್ಟಿಂಗ್ ನಡೆಸುತ್ತಿದ್ದ ಮನಿತ್ (26) ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯ ವಶದಿಂದ ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸಲಾಗುತ್ತಿದ್ದ ಐಫೋನ್ ಮೊಬೈಲ್ ಹಾಗೂ ನಗದು ರೂ.800ನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತನಿಖೆಯಲ್ಲಿ, ಆರೋಪಿಯು ಇತರರೊಂದಿಗೆ ಓಮನ್ ಹಾಗೂ ಜಿಂಬಾಂಬ್ವೆ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ, PARKKER777 ಎಂಬ ಆನ್‌ಲೈನ್ ಅಪ್ಲಿಕೇಶನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದನು ಎಂಬುದು ಬೆಳಕಿಗೆ ಬಂದಿದೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿ ಮನಿತ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

Related Articles

error: Content is protected !!