ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಆರ್ ಅಶೋಕ್ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ, ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರ್ ಅಶೋಕ್ ಹೆಸರನ್ನು ಘೋಷಣೆ ಮಾಡಿದರು. ಕರ್ನಾಟಕ ವಿಧಾನಸಭೆ ನಡೆದ 6 ತಿಂಗಳ ಬಳಿಕ ಬಿಜೆಪಿ ಕೊನೆಗೂ ವಿಪಕ್ಷ ನಾಯಕನ ಹೆಸರು ಘೋಷಣೆ ಮಾಡಿದೆ.
ಬಿ ವೈ ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಎರಡನೇ ದಿನದಲ್ಲೇ ಬಿಜೆಪಿ ವಿಪಕ್ಷ ನಾಯಕನ ಹೆಸರನ್ನೂ ಘೋಷಣೆ ಮಾಡಿದೆ. ಆರ್. ಅಶೋಕ್ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿದ್ದಾರೆ. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕನಾಗಿರುವ ಅಶೋಕ ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗಿಯೂ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕಂದಾಯ ಸಚಿವರಾಗಿ ಕೆಲಸ ಮಾಡಿದ್ದಾರೆ