ಕೋಟೇಶ್ವರ : ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ಕೋಟೇಶ್ವರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ಸಹಯೋಗದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಅಭಿನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು . ಕಾರ್ಯಕ್ರಮ ಉದ್ಘಾಟಿಸಿದ ಸಂಪನ್ಮೂಲ ವ್ಯಕ್ತಿಗಳಾದ ಡಾ. ಗಣನಾಥ ಶೆಟ್ಟಿ ಯಕ್ಕಾರ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಸಮಾನತೆ, ಸಹಬಾಳ್ವೆ, ಸಹೋದರತೆ, ಸಂವಹನ ಕಲೆ ಮತ್ತು ಸಾಮಾಜಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಪೂರಕ ವಾತಾವರಣ ಕಲ್ಪಿಸಿಕೊಡುತ್ತದೆ ಅಲ್ಲದೆ ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ರೂಪುಗೊಳ್ಳುವ ಅವಕಾಶಗಳನ್ನು ಒದಗಿಸಿಕೊಡುತ್ತದೆ ಆದುದರಿಂದ ಸೇವಾ ಮನೋಭಾವನೆಯನ್ನು ಹೊಂದಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಾಗಬೇಕು ಎಂದು ಕರೆಯಿತ್ತರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಡಾ. ಸುಬ್ರಹ್ಮಣ್ಯ ಎ. ಮಾತನಾಡಿ ಪಠ್ಯ ಕ್ರಮದೊಂದಿಗೆ ಪಠ್ಯಕ್ಕೆ ಪೂರಕವಾಗಿರುವಂತಹ ಚಟುವಟಿಕೆಗಳಲ್ಲಿ ಭಾಗವಹಿಸುವು ದರೊಂದಿಗೆ ವಿದ್ಯಾರ್ಥಿಗಳು ಜೀವನ ಕೌಶಲ್ಯಗಳನ್ನು ರೂಢಿಸಿಕೊಂಡು ಬದುಕಿನಲ್ಲಿ ಯಶಸ್ವಿಯಾಗಬೇಕೆಂದರು. ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ರ ಕಾರ್ಯಕ್ರಮ ಅಧಿಕಾರಿ ಡಾ. ಮಂಜುನಾಥ ಆಚಾರಿ ಸ್ವಾಗತಿಸಿದರು, ಘಟಕ 2 ರ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ವೈಶಾಲಿ ಜಿ ಆರ್ ವಂದನಾರ್ಪಣೆಗೈದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಮಚಂದ್ರ ಪಾಟ್ಕರ್ ಅತಿಥಿಗಳ ಪರಿಚಯಗೈದರು. ಕುಮಾರಿ ನಿಸರ್ಗ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇಯೋಜನೆ ಘಟಕಗಳ ನಾಯಕರುಗಳಾದ ಕುಮಾರಿ ನಿಸರ್ಗ ಹಾಗೂ ಪಾಲ್ಗುಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಪ್ರಥಮ ವರ್ಷದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು
ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಅಭಿನ್ಯಾಸ ಕಾರ್ಯಕ್ರಮ
Orientation program organized for students in collaboration with National Service Scheme (NSS) Units 1 and 2
4
