ನವದೆಹಲಿ : ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಸರ್ಕಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಅದರ ನೇತೃತ್ವದ ಕರ್ನಾಟಕ ಸರ್ಕಾರವನ್ನು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ
ಅನುದಾನದ ಹೆಸರಿನಲ್ಲಿ ದೇಶವನ್ನು ಉತ್ತರ-ದಕ್ಷಿಣ ಎಂದು ವಿಭಜಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಜಾಹೀರಾತು ಕೂಡ ನೀಡುತ್ತಿದೆ. ಇಂತಹ ಕ್ರಮಗಳು ದೇಶದ ಭವಿಷ್ಯವನ್ನೇ ಹಾಳು ಮಾಡುತ್ತವೆ ಎಂದು ಹರಿಹಾಯ್ದಿದ್ದಾರೆ.
“ನಮ್ಮ ತೆರಿಗೆ, ನಮ್ಮ ಹಣ’ ಎಂಬ ಭಾಷೆಯನ್ನು ಬಳಸಲಾಗುತ್ತಿದೆ. ಇದೆಂತಹ ಭಾಷೆ? ದೇಶವನ್ನು ಒಡೆಯಲು ಇಂತಹ ಭಾವನೆಗಳನ್ನು ವ್ಯಕ್ತಪಡಿಸಬೇಡಿ.ಇದು ದೇಶದ ಭವಿಷ್ಯಕ್ಕೆ ಅತ್ಯಂತ ಅಪಾಯಕಾರಿ ಇಡೀ ದೇಶವನ್ನು ಜತೆಯಾಗಿ ಒಯ್ಯಲು ಪ್ರಯತ್ನಿಸಿ ಎಂದು ಸಲಹೆ ಮಾಡಿದ್ದಾರೆ.