ಮೈಸೂರು : ಕರ್ನಾಟಕ ಮಾಹಿತಿ ತಂತ್ರಜ್ಞಾನದ ಬಹುದೊಡ್ಡ ಶಕ್ತಿಯ ಕೇಂದ್ರ. ಈ ನೆಲ ಸಮೃದ್ಧಿಯ ಭಾಗ. ಮೈಸೂರು, ಹಂಪಿ, ಬಾದಾಮಿಮುಂತಾದನಗರಗಳುಪಾರಂಪರಿಕ ನಗರವಾಗಿ ವಿಶ್ವ ಭೂಪಟದಲ್ಲಿ ತಮ್ಮ ಸ್ಥಾನ ಪಡೆದುಕೊಂಡಿವೆ. ಕನ್ನಡ ಭಾಷೆಯೂ ಸಮೃದ್ಧವಾಗಿದ್ದು, ಅದನ್ನು ವಿಶ್ವಮಟ್ಟದಲ್ಲಿ ಪ್ರಚಾರಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಬಿಜೆಪಿ-ಜೆಡಿಎಸ್ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ ದೇವೇಗೌಡರಂತಹ ಹಿರಿಯರ ಮಾರ್ಗದರ್ಶನವಿದೆ. ಯಡಿಯೂರಪ್ಪ, ಕುಮಾರಸ್ವಾಮಿ ಅವರಂಥ ಸಂಘಟಕರು ಇದ್ದಾರೆ. ಇವರು ಕರ್ನಾಟಕದ ಅಭಿವೃದ್ಧಿಗೆ ನೆರವಾಗಲಿದ್ದಾರೆ. ಸುತ್ತೂರು ಮಠ, ಕುವೆಂಪು ಅವರ ಧ್ವನಿ ಇಲ್ಲಿದೆ. ಕಾರ್ಯಪ್ಪ ಅವರಂತಹ ಮಹನೀಯರ ಕೊಡುಗೆ ಇದೆ. ಈ ನೆಲದ ವಿಕಾಸ ಅವರಿಂದ ಆಗಿದೆ ಎಂದು ನರೇಂದ್ರ ಮೋದಿ ಬಣ್ಣಿಸಿದರು