Home » 251ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ
 

251ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ

ಕೋಟ ಪಂಚವರ್ಣ

by Kundapur Xpress
Spread the love

ಕೋಟ : ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕೋಟ ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕ, ಹಂದಟ್ಟು ಮಹಿಳಾ ಬಳಗ ಕೋಟ,ಮಣೂರು ಫ್ರೆಂಡ್ಸ್, ಜೆಸಿಐ ಸಿನಿಯರ್ ಲಿಜನ್ ಕೋಟ ಇವರ ಸಹಯೋಗದೊಂದಿಗೆ 251 ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ತ್ಯಾಜ್ಯ ಮುಕ್ತ ಕಾರ್ಯಕ್ರಮ ಭಾನುವಾರ ಜರಗಿತು
ಸುಮಾರು 35ಕ್ಕೂ ಅಧಿಕ ಚೀಲ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಅಲ್ಲಿಂದ ತರೆವುಗೊಳಿಸಲಾಯಿತು. ಕೋಟ ಗ್ರಾಮಪಂಚಾಯತ್ ಸದಸ್ಯ ಅಜಿತ್ ದೇವಾಡಿಗ ಅಭಿಯಾನಕ್ಕೆ ಚಾಲನೆ ನೀಡಿದರು. ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ ಆಚಾರ್,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಮತ್ತಿತರರು ಉಪಸ್ಥಿತಿಯಲ್ಲಿ ಈ ಅಭಿಯಾನ ಸಂಪನ್ನಗೊಂಡಿತು. ಕಾರ್ಯಕ್ರಮವನ್ನು ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.

 

Related Articles

error: Content is protected !!