Home » ಆಸಾಡಿ ಒಡ್ರ್ : ಸಾಧಕ ಪುರಸ್ಕಾರಕ್ಕೆ ಭಾರತಿ.ವಿ.ಮೈಯ್ಯ ಆಯ್ಕೆ 
 

ಆಸಾಡಿ ಒಡ್ರ್ : ಸಾಧಕ ಪುರಸ್ಕಾರಕ್ಕೆ ಭಾರತಿ.ವಿ.ಮೈಯ್ಯ ಆಯ್ಕೆ 

by Kundapur Xpress
Spread the love

ಕೋಟ: ಇಲ್ಲಿನ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊAದಿಗೆ ನಡೆಯಲಿರುವ ನಾಲ್ಕನೇ ವರ್ಷದ “ಆಸಾಡಿ ಒಡ್ರ್ ಸಾಧಕ ಪುರಸ್ಕಾರಕ್ಕೆ ಸಾಮಾಜಿಕ ಹಾಗೂ ಸಾಂಸ್ಕ್ರತಿಕ ಕ್ಷೇತ್ರದಲ್ಲಿ ಗುರುತಿಸಲ್ಪಟ್ಟ ಮಣೂರು ಭಾರತಿ ವಿಷ್ಣುಮೂರ್ತಿ ಮೈಯ್ಯ ಆಯ್ಕೆಗೊಳಿಸಲಾಗಿದೆ.

ಅಗಸ್ಟ್ 10ರ ಭಾನುವಾರ ಬೆಳಿಗ್ಗೆ 9.00ರಿಂದ ಹಂದಟ್ಟು ಗೆಳೆಯರ ಬಳಗ ಸಭಾಂಗಣದಲ್ಲಿ ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಹಮ್ಮಿಕೊಳ್ಳಲಿರುವ “ಆಸಾಡಿ ಒಡ್ರ್ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಿದೆ.

ವಿಶೇಷ ಆಹ್ವಾನಿತರಾಗಿ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಕುಂದಗನ್ನಡ ರವಿ ಬಸ್ರೂರು ಹಾಗೂ ಕುಂದಗನ್ನಡದ ಲೇಖಕಿ ಪೂರ್ಣಿಮಾ ಕಮಲಶಿಲೆ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮೀಣ ತಿನಿಸುಗಳು, ಪರಿಕರ ಪ್ರದರ್ಶನ ,ಸ್ಪರ್ಧೆ, ಅನಾಥಾಶ್ರಮಕ್ಕೆ ನೆರವು, ಸ್ನೇಹಕೂಟ ಮಣೂರು ಇವರುಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರಗಲಿದೆ

 

Related Articles

error: Content is protected !!