ಉಡುಪಿ : ಉಡುಪಿಯ ರಾ ಸ್ವ ಸಂಘದ ಹಿರಿಯ ಸಕ್ರಿಯ ಸ್ವಯಂಸೇವಕರಾದ ಮತ್ತು ರಾಷ್ಟ್ರಭಕ್ತ ಪಾಂಡುರಂಗ ಶಾನುಭಾಗರು ಅಯೋಧ್ಯೆಯಲ್ಲಿ ಭಾನುವಾರ ಮಧ್ಯಾಹ್ನ ರಾಮಮಂದಿರದ ಸಮೀಪದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ
ನಿನ್ನೆ ಆದಿತ್ಯವಾರ ಬೆಳಿಗ್ಗೆ ರಾಮನ ದರ್ಶನ ಪಡೆದು ಅತ್ಯಂತ ಧನ್ಯತೆಯನ್ನು ವ್ಯಕ್ತಪಡಿಸಿ ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂತೋಷದಿಂದ ತೆರಳಿದ್ದರು
ಅಪರಾಹ್ನದ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರ ಭಾಗದ ಗೇಟ್ ಬಳಿಯಲ್ಲಿ ಅವರಿಗೆ ಹೃದಯಾಘಾತವಾಗಿದೆ ಸಮೀಪ ವರ್ತಿಗಳು ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.
ದೈಹಿಕ ಅಂಧತ್ವವಿದ್ದರೂ ಜೀವನ ಪರ್ಯಂತ ಹಿಂದು ಸಿದ್ಧಾಂತಕ್ಕಾಗಿ ಸಂಘದಲ್ಲಿ ಅತ್ಯಂತ ಸಕ್ರಿಯರಾಗಿದ್ದ ಶಾನುಭಾಗರು ಅಪೂರ್ವ ಚಿಂತಕರೂ ರಾಷ್ಟ್ರ ಭಕ್ತರೂ ಆಗಿದ್ದರು
ಸಿಂಡಿಕೇಟ್ ಬ್ಯಾಂಕಿನ ಉದ್ಯೋಗಿಯಾಗಿದ್ದ ಅವರು 2018 ರಲ್ಲಿ ನಿವೃತ್ತಿ ಹೊಂದಿದ್ದರು ಅವರಿಗೆ 65 ವರ್ಷ ವಯಸ್ಸಾಗಿದ್ದು ಓರ್ವ ಪುತ್ರ ಹಾಗೂ ಒರ್ವ ಪುತ್ರಿಯನ್ನು ಅಗಲಿದ್ದಾರೆ