Home » ಅಂತಿಮ ವರ್ಷದ ವಿದ್ಯಾರ್ಥಿಗಳ ಪೋಷಕರ ಸಭೆ
 

ಅಂತಿಮ ವರ್ಷದ ವಿದ್ಯಾರ್ಥಿಗಳ ಪೋಷಕರ ಸಭೆ

by Kundapur Xpress
Spread the love

ಕುಂದಾಪುರ : ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂಬಿಎ ಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಶಿಸ್ತು ಹಾಜರಾತಿ ಭವಿಷ್ಯದ ವೃತ್ತಿ ಅವಕಾಶಗಳ ಕುರಿತು ಚರ್ಚಿಸಲಾಯಿತು. ಎಂಬಿಎ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಕಾಲೇಜಿನ ಬಗ್ಗೆ ಸಂಕ್ಷಿಪ್ತವಾಗಿ ಪರಿಚಯವನ್ನು ನೀಡಿದರು. ತರಗತಿ ಉಪನ್ಯಾಸಕರಾದ ಶ್ರೀಮತಿ ಶ್ರೀಮತಿ ತಿಲಕಲಕ್ಷ್ಮೀ ಇವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಎಂಬಿಎ, ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ನಾಗವೇಣಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

 

Related Articles

error: Content is protected !!