ಕುಂದಾಪುರ: ಪುರಸಭಾ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ನಗರದಲ್ಲಿ ವಾಹನ ನಿಲುಗಡೆಯ ಸಮಸ್ಯೆಯಿಂದ ವಾಹನ ಸವಾರರು ಪರದಾಡುತ್ತಿದ್ದು ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಕುಂದಾಪುರ ಪುರಸಭೆಯ ಸಭಾಂಗಣದಲ್ಲಿ ಮಾತನಾಡಿ ಕುಂದಾಪುರ ನಗರದಲ್ಲಿ ಸುಗಮ ವಾಹನ ನಿಲುಗಡೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹಾಗೂ ಪುರಸಭಾ ಸದಸ್ಯರ ಜೊತೆಗೆ ಚರ್ಚೆ ನಡೆಸಿದ ಬಳಿಕ ಸರ್ವ ಸದಸ್ಯರ ಒಮ್ಮತದ ನಿರ್ಧಾರದ ಜೊತೆಗೆ ಅನುಮತಿ ಸೂಚಿಸಿದ್ದು ಶಾಸಕರು ಕುಂದಾಪುರ ಪುರಸಭೆಯ ಮುಖ್ಯ ಅಧಿಕಾರಿ ಅವರಿಗೆ ಹಾಗೂ ಕುಂದಾಪುರ ಪೊಲೀಸ್ ಸಂಚಾರ ಠಾಣಾಧಿಕಾರಿ ಅವರಿಗೆ ಶಾಸಕರು ಒಂದು ತಿಂಗಳ ಒಳಗೆ ವಾಹನದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಈ ಸಭೆಯಲ್ಲಿ ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಉಪಾದಕ್ಷೆ ಶ್ರೀಮತಿ ವನಿತಾ ಬಿಲ್ಲವ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ ವಿ,,ಕುಂದಾಪುರ ಪುರಸಭೆ ಮುಖ್ಯ ಅಧಿಕಾರಿ ಆನಂದ ಜಿ,ಪುರಸಭೆಯ ಸರ್ವ ಸದಸ್ಯರು ಮತ್ತು ವಿವಿಧ ಇಲಾಖೆ ಅಧಿಕಾರಿಗಳು, ಕುಂದಾಪುರ ಸಂಚಾರ ಪೊಲೀಸ್ ಠಾಣೆ ಹಾಗೂ ಕುಂದಾಪುರ ಪೋಲಿಸ್ ಉಪ ಅಧೀಕ್ಷಕರು,ಕುಂದಾಪುರ ಲಯನ್ಸ್ ಕ್ಲಬ್ಬಿನ ಅಧ್ಯಕ್ಷರು ಹಾಗೂ ಸದಸ್ಯರು,ಮತ್ತು ಇನ್ನಿತರರು ಉಪಸ್ಥಿತರಿದ್ದರು.

