Home » ಶಿರೂರು ಮಠದ ಪರ್ಯಾಯ ಹೊರೆ ಕಾಣಿಕೆ ಪೂರ್ವಭಾವಿ ಸಭೆ
 

ಶಿರೂರು ಮಠದ ಪರ್ಯಾಯ ಹೊರೆ ಕಾಣಿಕೆ ಪೂರ್ವಭಾವಿ ಸಭೆ

by Kundapur Xpress
Spread the love

ಉಡುಪಿ : ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಪರ್ಯಾಯ ಸಲುವಾಗಿ ನಡೆಯುವ ಹೊರೆ ಕಾಣಿಕೆಯ ಪೂರ್ವಭಾವಿ ಸಭೆ ಕಾಪು ಹೊಸ ಮಾರಿಗುಡಿಯ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಶಾಸಕರು ಮಾತನಾಡಿ 2 ವರ್ಷಕ್ಕೊಮ್ಮೆ ನಡೆಯುವ ಪರ್ಯಾಯ ಉಡುಪಿಗರಿಗೆ ಬಹಳ ವಿಶೇಷವಾದದ್ದು ಹಾಗೂ ಹೊರ ಜಿಲ್ಲೆ ಹೊರ ರಾಜ್ಯಗಳಿಂದ ಜನರು ಇದನ್ನು ನೊಡಲು ಬರುತ್ತಾರೆ. ಈ ಬಾರಿ ನಡೆಯುವ ಶಿರೂರು ಮಠದ ಪರ್ಯಾಯ ದಲ್ಲಿ ನಾವೆಲ್ಲರೂ ಭಾಗವಹಿಸಿ ತನು ಮನ ಧನ ಸಹಾಯ ಮಾಡುವ ಮೂಲಕ ಪೊಡವಿಗೊಡೆಯನ ಕೃಪೆಗೆ ಪಾತ್ರರಾಗೋಣ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಶಿರೂರು ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮಟ್ಟಾರು ರತ್ನಾಕರ್ ಹೆಗ್ಡೆ, ಕಾರ್ಯದರ್ಶಿಗಳಾದ ಮೋಹನ್ ಭಟ್, ಜೊತೆ ಕಾರ್ಯದರ್ಶಿಯಾಗಿ ಶ್ರೀಕಾಂತ್ ನಾಯಕ್, ವಿಷ್ಣುಪ್ರಸಾದ್ ಪಾಡಿಗಾರ, ಶಿರೂರು ಮಠದ ದಿವಾನರಾದ ಉದಯ ಸರಳತ್ತಾಯ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಹೆಗ್ಡೆ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾಸುದೇವ ಶೆಟ್ಟಿ ಹಾಗೂ ಬಾಲಾಜಿ ಯೋಗೀಶ್ ಶೆಟ್ಟಿ, ಮಾಧವ ಪಾಲನ್, ಹೊರೆ ಕಾಣಿಕೆ ಸಮಿತಿಯ ಅಧ್ಯಕ್ಷರಾದ ಸುಪ್ರಸಾದ್ ಶೆಟ್ಟಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

 

Related Articles

error: Content is protected !!