Home » ರಾಮ ನಾಮ ಬಳಕೆ ತಪ್ಪಲ್ಲ
 

ರಾಮ ನಾಮ ಬಳಕೆ ತಪ್ಪಲ್ಲ

ಪೇಜಾವರ ಶ್ರೀ

by Kundapur Xpress
Spread the love

ದಾವಣಗೆರೆ : ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆ ಶ್ರೀರಾಮಮಂದಿರ ವಿಚಾರವನ್ನು ಬಿಜೆಪಿಯವರು ಬಳಸಿ ಕೊಂಡರೆ ತಪ್ಪೇನೂ ಇಲ್ಲ. ಶ್ರೀರಾಮ ಮಂದಿರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯವರು ಕೆಲಸ ಮಾಡಿದ್ದಾರೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಮಮಂದಿರ ನಿರ್ಮಾಣಕ್ಕಾಗಿ ಶ್ರಮಪಟ್ಟಿದ್ದಾರೆ. ಹಾಗಾಗಿ ಚುನಾವಣೆಗೆ ಮಂದಿರ ವಿಚಾರವನ್ನು ಹೇಳಿಕೊಳ್ಳುವುದರಲ್ಲಿ ಯಾವುದೇ  ತಪ್ಪ ಇಲ್ಲ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲು ಮಂದಿರ ನಿರ್ಮಾಣ ಕಾರ್ಯ ಒಂದು ಅವಕಾಶವಾಗಬಹುದು. ರಾಮ ಮಂದಿರದ ಶತಮಾನಗಳ ಕನಸು ಈಗ ನನಸಾಗಿದೆ. ಇನ್ನು ರಾಮ ರಾಜ್ಯವಾಗಲು ಶ್ರೀರಾಮನ ಅನುಗ್ರಹ ಬೇಕಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸೋಣ ಎಂದರು.

   

Related Articles

error: Content is protected !!