ಉಡುಪಿ : ಖಾಸಗಿ ನರ್ಸಿಂಗ್ ಕಾಲೇಜಿನ ವಾಶ್ ರೂಮಿನಲ್ಲಿ ನಡೆದ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ ಘಟನೆಗೆ ಸಂಬಂಧಪಟ್ಟ ಫೋನ್ ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾದ ಖೂಷ್ಭೂ ತಿಳಿಸಿದ್ದಾರೆ ಅವರು ಗುರುವಾರ ಕಾಲೇಜಿಗೆ ಭೇಟಿ ನೀಡಿ ವಿಚಾರ ವಿನಿಮಯ ನಡೆಸಿದ ಬಳಿಕ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು
ಆರೋಪಗಳ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಸೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿಲ್ಲ ಇದೊಂದು ಶೈಕ್ಷಣಿಕ ಕೇಂದ್ರವಾಗಿದ್ದು ಹಿಡನ್ ಕ್ಯಾಮೆರಾ ಇಡಲು ಸಾಧ್ಯವಿಲ್ಲ ಪೊಲೀಸರ ಜೊತೆಗೆ ನಾವು ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ ಪೊಲೀಸರ ಸಹಕಾರದೊಂದಿಗೆ ಆಯೋಗದಿಂದಲೂ ತನಿಖೆ ಮುಂದುವರಿಯಲಿದೆ ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ ಎಂದು ನುಡಿದರು
ಮಹಿಳಾ ಪಿಎಸ್ಐ ನೇತೃತ್ವದ ತಂಡ ರಚನೆ : ಖಾಸಗಿ ನರ್ಸಿಂಗ್ ಕಾಲೇಜಿನ ವಾಶ್ ರೂಂನಲ್ಲಿ ನಡೆದ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ತನಿಖಾಧಿಕಾರಿಯನ್ನು ಬದಲಾಯಿಸಿದ್ದು ಮಹಿಳಾ ಪಿಎಸ್ಐ ಒಬ್ಬರ ನೇತೃತ್ವದಲ್ಲಿ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ