ಉಡುಪಿ : ಮಾಧ್ಯಮಗಳು ವೀಕ್ಷಕರ ಹಾಗೂ ಓದುಗರ ಸಂಖ್ಯೆ ಹೆಚ್ಚು ಮಾಡುವ ದಾವಂತದಲ್ಲಿ ಸುದ್ದಿಯ ಬೆನ್ನುಹತ್ತದೆ ಅದರ ಸೂಕ್ಷ್ಮತೆ ಕಾಪಾಡಿಕೊಂಡು ಸತ್ಯಾಸತ್ಯತೆ ತಿಳಿದು ವರದಿ ಮಾಡಬೇಕು ಸೂಕ್ಷ್ಮತೆಯಿಂದ ಕೂಡಿದ ಸುದ್ದಿಗಳನ್ನು ಅದರ ನೈಜತೆ ಗಂಭೀರತೆ ಪ್ರಾಮುಖ್ಯತೆ ಹಾಗೂ ಆಳವನ್ನು ತಿಳಿದು ಜನರ ಮುಂದೆ ಇಟ್ಟಾಗ ಮಾತ್ರ ಅದಕ್ಕೆ ನ್ಯಾಯ ಒದಗಿಸಲು ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರು ಅಭಿಪ್ರಾಯಪಟ್ಟರು
ವಿಶ್ವ ಛಾಯಾಗ್ರಹಣದ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವ ಸಮಿತಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ಪ್ರಾಯೋಜಕತ್ವದಲ್ಲಿ ಶನಿವಾರ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ನಡೆದ ಪತ್ರಿಕೋದ್ಯಮ ಮತ್ತು ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು
ಸಾಮಾಜಿಕ ಜಾಲತಾಣಗಳಿಗೆ ಗಡಿ ಎಂಬುದು ಇಲ್ಲ ಅಲ್ಲಿ ಯಾರು ಕೂಡ ಏನು ಬೇಕಾದರೂ ಬರೆಯಬಹುದು ಅದರಲ್ಲಿ ಸತ್ಯ ಸುಳ್ಳು ಇರುತ್ತದೆ ಕೆಲವು ಜನರಿಗೆ ಕೆಲವು ವಿಷಯಗಳ ಬಗ್ಗೆ ಏನು ತಿಳಿದಿಲ್ಲವಾದರೂ ಅದರ ಬಗ್ಗೆ ಹೆಚ್ಚು ಮಾತನಾಡುತ್ತಾರೆ ಇದು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಿಗೆ ಇರುವ ವ್ಯತ್ಯಾಸವಾಗಿದೆ ಅದನ್ನು ಉಳಿಸಬೇಕಾದರೆ ಸತ್ಯವನ್ನು ಅರಿತು ಸುದ್ದಿಯನ್ನು ಮಾಡಬೇಕು ಎಂದು ಅವರು ತಿಳಿಸಿದರು ಪ್ರತಕರ್ತ
ಸುಭಾಸ್ ಚಂದ್ರ ನಿರೂಪಿಸಿದ ಕಾರ್ಯಕ್ರಮದಲ್ಲಿ ನಝೀರ್ ಸ್ವಾಗತಿಸಿ ಉಮೇಶ್ ಮಾರ್ಪಳ್ಳಿ ವಂದಿಸಿದರು ಹಳೆಯ ಕ್ಯಾಮರಾಗಳು ಮತ್ತು ಛಾಯಾಚಿತ್ರ ಪ್ರದರ್ಶನ ಎಲ್ಲರ ಗಮನ ಸೆಳೆಯಿತು