Home » ವೇಶ್ಯಾವಾಟಿಕೆ ಅಡ್ಡಗೆ ದಾಳಿ : ಪೋಕ್ಸೋ ಪ್ರಕರಣ ದಾಖಲು
 

ವೇಶ್ಯಾವಾಟಿಕೆ ಅಡ್ಡಗೆ ದಾಳಿ : ಪೋಕ್ಸೋ ಪ್ರಕರಣ ದಾಖಲು

by Kundapur Xpress
Spread the love

ಮೂಡುಬಿದಿರೆ: ವೇಶ್ಯಾವಾಟಿಕೆ ಅಡ್ಡಗೆ ದಾಳಿ ನಡೆಸಿದ ಮೂಡುಬಿದ್ರೆ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ನಿಡ್ಡೋಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಬಂಧಿತ ಆರೋಪಿಗಳನ್ನು ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ನೇಶ್, ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ.ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ನಾಲ್ಕು ಮಂದಿ ಯುವಕರ ತಂಡವೊಂದು ನಿಡ್ಡೋಡಿಯ ಮನೆಯೊಂದರಲ್ಲಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇನ್ನೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸ್ ತಂಡವು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಹೇಶನ ಮನೆಯಲ್ಲಿ ಅವನೊಬ್ಬನೇ ವಾಸವಿದ್ದುದರಿಂದ ಆ ಮನೆಯನ್ನು ಈ ಕೃತ್ಯಕ್ಕೆ ಉಪಯೋಗಿಸುತ್ತಿದ್ದನು ಎಂಬ ಮಾಹಿತಿ ಲಭಿಸಿದೆ.ಆರೋಪಿಗಳ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯರನ್ನು ಮತ್ತು ಆರೋಪಿಗಳನ್ನು ಠಾಣೆಗೆ ತಂದು ವಿಚಾರಿಸಿದಾಗ ಎಲ್ಲ ವಿಚಾರಗಳನ್ನೂ ಬಾಯಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇನ್ಸ್‌ಪೆಕ್ಟರ್ ಸಂದೇಶ್‌ ಪಿ.ಜಿ.ಅವರ ಸಮಯಪ್ರಜ್ಞೆ ಮತ್ತು ಆರೋಪಿಗಳನ್ನು ಬಂಧಿಸಿರುವ ಕ್ರಮಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

 

Related Articles

error: Content is protected !!