Home » ಸಾರ್ವಜನಿಕರ ಸುರಕ್ಷತೆಗಾಗಿ ಮನೆಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮಕ್ಕೆ ಚಾಲನೆ
 

ಸಾರ್ವಜನಿಕರ ಸುರಕ್ಷತೆಗಾಗಿ ಮನೆಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮಕ್ಕೆ ಚಾಲನೆ

by Kundapur Xpress
Spread the love

ಕೋಟ : ಸಾರ್ವಜನಿಕರ ಸುರಕ್ಷತೆಗಾಗಿ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು ಅಪರಾಧ ತಡೆ ಹಾಗೂ ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಈ ಕ್ರಮ ಪ್ರಮುಖ ಪಾತ್ರ ವಹಿಸುವ ಉದ್ದೇಶದಿಂದ ಸಾರ್ವಜನಿಕರ ಸಹಕಾರದಿಂದ ಪೊಲೀಸರು ಶಂಕಾಸ್ಪದ ಚಟುವಟಿಕೆಗಳನ್ನು ಬೇಗ ಗುರುತಿಸಿ ತಡೆಗಟ್ಟುವುದು ಸೇರಿದಂತೆ ಜನರಲ್ಲಿ ನಂಬಿಕೆ ಬೆಳೆಸುವುದು, ಸಮುದಾಯ ಪೊಲೀಸ್ ವ್ಯವಸ್ಥೆಯು ಪೊಲೀಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸದ ಸಂಬಂಧವನ್ನು ನಿರ್ಮಿಸುವುದು ಇದರ ಉದ್ದೇಶವಾಗಿದೆ ಎಂದು ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿ ಕೃಷ್ಣ ಹೇಳಿದರು.

ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಭಾಗಗಳ ಸಾರ್ವಜನಿಕರ ಸುರಕ್ಷತೆಗಾಗಿ ಮನೆಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮಕ್ಕೆ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಅವರು ಚಾಲನೆ ನೀಡಿ ಮಾತನಾಡಿ ಜನಸಾಮಾನ್ಯರಲ್ಲಿ ಪೋಲಿಸ್ ಇಲಾಖೆಯ ಕುರಿತು ಜಾಗೃತಿ ಹಾಗೂ ಸ್ನೇಹ ವೃದ್ಧಿಸಲು ಈ ಯೋಜನ ಸಹಕಾರಿ ಅಪರಾಧ ತಡೆಗೆ ಮಹತ್ವದ ಪಾತ್ರ ವಹಿಸಲಿದೆ ಎಂದರು.

ಈ ಸಂದರ್ಭದಲ್ಲಿ ಕೋಟ ಉಪನಿರೀಕ್ಷಕ ರಾಘವೇಂದ್ರ ಸಿ. ಕೋಟ ಮತ್ತು ಸಿಬ್ಬಂದಿಗಳು ಹಾಗೂ ಕೋಟ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

 

Related Articles

error: Content is protected !!