241
ಮಂಗಳೂರು : ಮಂಗಳೂರು ತಾಲೂಕಿನ ಅಡ್ಡೂರು ಎಂಬಲ್ಲಿ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆ ಅಡ್ಡೆಗೆ ಶನಿವಾರ ಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿ ಸಿದ್ದಾರ್ಥ್ ಅವರ
ನೇತೃತ್ವದಲ್ಲಿ ಶನಿವಾರ ಮುಂಜಾನೆ 4 ಗಂಟೆಗೆ ಸುಮಾರಿಗೆ ಅಡ್ಡೂರು ಗ್ರಾಮದ ನಂದ್ಯ ಎಂಬಲ್ಲಿ ಪಲ್ಗುಣಿ ನದಿಯಿಂದ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸಿ ಪರವಾನಿಗೆ ಇಲ್ಲದೆ ಟಿಪ್ಪರ್ ಲಾರಿಗಳಿಗೆ ತುಂಬಿಸಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಧಾಳಿ ನಡೆಸಿದ್ದಾರೆ ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


