ಉಡುಪಿ ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ, ಭೂಸ್ವಾಧೀನ ಪರಿಹಾರ ಸೇರಿದಂತೆ ಸೇತುವೆ ಸಹಿತ ಚತುಷ್ಪಥವಾಗಿ ರಸ್ತೆ ಅಭಿವೃದ್ಧಿಗೊಳಿಸಲು ರೂ. 70.00 ಕೋಟಿ ಮಂಜೂರಾಗಿದ್ದು,ತಾರೀಖು 10-03-2023ರಂದು ಕಲ್ಮಾಡಿ ಬ್ರಿಡ್ಜ್ ಬಳಿಯಲ್ಲಿ ರಸ್ತೆ ಕಾಮಗಾರಿ ಹಾಗೂ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ ಮಲ್ಪೆ ರಸ್ತೆಯ ಅಭಿವೃಧ್ದಿಯ ಮೂಲಕ ಮಲ್ಪೆ ಮೀನುಗಾರಿಕೆ ಬಂದರು ಮತ್ತು ಪ್ರವಾಸೋದ್ಯಮ ಚಟುವಟಿಕೆಗಳು ಇನ್ನಷ್ಟು ಅಭಿವೃಧ್ದಿ ಹೊಂದಲು ಸಾಧ್ಯ ಎಂದರು
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯರಾದ ಸುಂದರ್ ಕಲ್ಮಾಡಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ರಾಷ್ಟ್ರೀಯ ಹೆದ್ದಾರಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾಗರಾಜ್ ನಾಯಕ್ ಹಾಗೂ ಸ್ಥಳೀಯರು ನಗರಸಭಾ ಸದಸ್ಯರು, ಮೀನುಗಾರ ಮುಖಂಡರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು