Home » ಪೋಷಣ ಅಭಿಯಾನ ಮತ್ತು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ರಜತ ಮಹೋತ್ಸವ
 

ಪೋಷಣ ಅಭಿಯಾನ ಮತ್ತು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ರಜತ ಮಹೋತ್ಸವ

ಶಾಸಕ.ಎ.ಕಿರಣ್ ಕೊಡ್ಗಿ

by Kundapur Xpress
Spread the love

ಕುಂದಾಪುರ : ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನಿವಾರಿಸುವ ನಿಟ್ಟಿನಿಂದ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿ ಕೇಂದ್ರಗಳಲ್ಲಿ ವಿವಿಧ ಚಟುವಟಿಕೆಗಳು ಹಾಗೂ ಸಾಮಾಜಿಕ ಅಭಿಯಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಶ್ರೀ ವಿನಾಯಕ ಸಭಾಭವನ ಆನೆಗುಡ್ಡೆ ಕುಂಭಾಶಿ ಪೋಷಣ ಅಭಿಯಾನ ಮತ್ತು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ರಜತ ಮಹೋತ್ಸವದ ಕಾರ್ಯಕ್ರಮವನ್ನ ಗಿಡಕ್ಕೆ ನೀರನ್ನ ಹಾಕಿ ವಿಶಿಷ್ಟವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಇದೆ ಸಂದರ್ಭದಲ್ಲಿ ಕುಂಭಾಶಿ ಗ್ರಾಮ ಪಂಚಾಯತ್ ಪಿಡಿಒ ವರ್ಗಾವಣೆಗೊಳ್ಳುತ್ತಿರುವ ಹಿನ್ನೆಲೆ ಪಿಡಿಒ ಜಯರಾಂ ಶೆಟ್ಟಿ ಹಾಗೂ ಕುಂಭಾಶಿ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ವೃತ್ತಿಯನ್ನು ಮಾಡಿ ಇತ್ತೀಚಿಗೆ ನಿವೃತ್ತಿ ಪಡೆದ ಶ್ರೀಮತಿ ಪ್ರೇಮ ಮತ್ತು ಸಮಾಜ ಸೇವಕಿ ರಾಧಾ ದಾಸ್ ಕುಂಬಾಶಿ ಇವರನ್ನ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಭಾಶಿ ಗ್ರಾಮ ಪಂಚಾಯತ್ ಅಧ್ಯಕ್ಷ ಆನಂದ ಪೂಜಾರಿ ಅವರು ವಹಿಸಿದರು,.ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ್ ಕೊಟ್ಯಾನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡಾ. ರಾಘವೇಂದ್ರ ಹೆಬ್ಬಾರ್ ಆರೋಗ್ಯದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ವೇದಿಕೆಯಲ್ಲಿ ಕುಂಭಾಶಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶ್ವೇತಾ ಶ್ರೀನಿಧಿ ಉಪಾಧ್ಯಾಯ,, ಶೋಭಾ ಮೆಂಡನ್,ಶ್ರೀಮತಿ ಲಿಲಿತಾ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ. ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

 

Related Articles

error: Content is protected !!