ಚಿಕ್ಕಮಗಳೂರು : ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಅವರದೇ ಪಕ್ಷದ ಕಾರ್ಯಕರ್ತರು ಪತ್ರ ಅಭಿಯಾನ ಕೈಗೊಂಡಿದ್ದಾರೆ `ಎರಡು ಅವಧಿಯಿಂದ ಈ ಕ್ಷೇತ್ರದ ಸಂಸದರಾಗಿದ್ದಾರೆ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಕೆಲಸ ಆಗಿಲ್ಲ. ಹಾಗಾಗಿ ಈ ಬಾರಿ ಟಿಕೆಟ್ ನೀಡಬಾರದೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದಿರುವ ಕಾರ್ಯಕರ್ತರು ಚಿಕ್ಕಮಗಳೂರಿನ ಅಂಚೆ ಕಚೇರಿಯಲ್ಲಿ ಬುಧವಾರ ಪೋಸ್ಟ್ ಮಾಡಿದರು. ಕಳೆದ ಬಾರಿಯೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ‘ಗೋ ಬ್ಯಾಕ್ ಶೋಭಾ’ ಎಂಬ ಕೂಗು ಕೇಳಿ ಬಂದಿತ್ತು. ನಂತರ ಗೋ ಬ್ಯಾಕ್ ಎಂದವರು ಶೋಭಾ ಸಚಿವರಾದಾಗ ಚಿಕ್ಕಮಗಳೂರಿನಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದ್ದರು