ಕೋಟ : ಇಲ್ಲಿನ ಮಣೂರು ಪಡುಕರೆ ಇಂಡಿಕಾ ಕಲಾ ಬಳಗ ಇವರ ಪ್ರತಿವರ್ಷ ನಡೆಸಲ್ಪಡುವ ಇಂಡಿಕಾ ಸಂಭ್ರಮ 2025 ಇದರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಬುಧವಾರ ಕೋಟ ಅಮೃತೇಶ್ವರಿ ದೇಗುಲದ ಸಭಾಂಗಣದಲ್ಲಿ ನಡೆಯಿತು. ಪೋಸ್ಟರ್ ಅನ್ನು ಕೋಟ ಅಮೃತೇಶ್ವರಿ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಕೋಟ ಅಮೃತೇಶ್ವರಿ ದೇಗುಲದ ಟ್ರಸ್ಟಿ ಶಿವ ಪೂಜಾರಿ,ಸುಭಾಷ್ ಶೆಟ್ಟಿ,ಕೋಟ ಗ್ರಾ.ಪಂ ಎಸ್ ಎಲ್ ಆರ್ ಎಂ ಘಟಕದ ಮುಖ್ಯಸ್ಥೆ ಭವ್ಯ,ನ್ಯಾಯವಾದಿ ಟಿ.ಮಂಜುನಾಥ್ ಗಿಳಿಯಾರ್,ಸಾಮಾಜಿಕ ಕಾರ್ಯಕರ್ತ ನಾಗರಾಜ್ ಗಾಣಿಗ,ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಖ ,ಇಂಡಿಕಾ ಕಲಾಬಳಗದ ಪ್ರಭಾಕರ್ ಮಣೂರು ಉಪಸ್ಥಿತರಿದ್ದರು.ಇಂಡಿಕಾ ಕಲಾ ಬಳಗದ ಅಧ್ಯಕ್ಷ ಎಂ ಜಯರಾಮ ಶೆಟ್ಟಿ ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಚಂದ್ರ ಆಚಾರ್ ಸ್ವಾಗತಿಸಿ ನಿರೂಪಿಸಿದರು.ಸಂಚಾಲಕ ಸಂತೋಷ್ ಕುಮಾರ್ ಕೋಟ ಪ್ರಾಸ್ತಾವನೆ ಸಲ್ಲಿಸಿ ವಂದಿಸಿದರು.