Home » ರಾಜ್ಯದಲ್ಲಿ ಹಿಂದು ವಿರೋಧಿ ಕೃತ್ಯ ತೀವ್ರ
 

ರಾಜ್ಯದಲ್ಲಿ ಹಿಂದು ವಿರೋಧಿ ಕೃತ್ಯ ತೀವ್ರ

ಪ್ರಹ್ಲಾದ ಜೋಶಿ

by Kundapur Xpress
Spread the love

ಹುಬ್ಬಳ್ಳಿ: ರಾಜ್ಯದಲ್ಲೀಗ ಹಿಂದೂ ವಿರೋಧಿ, ದೇಶ ವಿರೋಧಿ ನಡೆ ತೀವ್ರವಾಗಿದ್ದು, ಇದಕ್ಕೆಲ್ಲ ಕಾಂಗ್ರೆಸ್ ನೇರ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ಮಂಗಳವಾರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಏಕೆ ಇಂತಹ ಹಿಂದು ವಿರೋಧಿ ಕೃತ್ಯಗಳು ನಡೆಯುತ್ತಿವೆ. ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರದ  ಮೃದು ಧೋರಣೆಯೇ ಕಾರಣವಾಗಿದೆ ಎಂದರು. ಈಚೆಗೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದರು. ಎಫ್‌ಎಸ್ಎಲ್ ವರದಿ ಬಂದರೂ ಸಹ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನ ರಾಮೇಶ್ವರ ಕೆಫೆನಲ್ಲಿ ಬಾಂಬ್ ಬ್ಲಾಸ್ಟ್ ಆದರೂ ಸಹ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈಗ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿದೆ ಎಂದರೆ ರಾಜ್ಯದಲ್ಲಿ ಹಿಂದುಗಳಿಗೆ ರಕ್ಷಣೆಯೇ ಇಲ್ಲದಾಗಿದೆ ಎಂದರು

   

Related Articles

error: Content is protected !!