ಬೆಳಗಾವಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ * ಪ್ರಕರಣದ ಕುರಿತು ಬಿಜೆಪಿನಾಯಕರು ತಮ್ಮ ನಿಲುವೇನು ಎಂಬುವುದನ್ನು ಸ್ಪಷ್ಟಪಡಿಸಬೇಕು ಎಂದು ಡಿಸಿಎಂ ಡಿ. ಕೆ.ಶಿವಕುಮಾರ ಆಗ್ರಹಿಸಿದರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಪ್ರಕರಣ ಸಂಬಂಧ ಈಗಾಗಲೇ ತನಿಖಾಧಿಕಾರಿಗಳು ಕೆಲಸ, ಮಾಡುತ್ತಿದ್ದಾರೆ. ವಿಜಯೇಂದ್ರ, ಆರ್. ಅಶೋಕ ಸೇರಿದಂತೆ ಬಿಜೆಪಿ ನಾಯಕರು ನುಣುಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.