ಕಾರ್ಕಳ : ಕೊನೆಗೂ ರಾಜ್ಯ ಸರ್ಕಾರ ಇಲ್ಲಿನ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಹಗರಣವನ್ನುಸಿಐಡಿಗೆ ಒಪ್ಪಿಸಿದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಪಕ್ಷದ ಸ್ಥಳೀಯ ಕಾರ್ಯಕರ್ತರು ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರದ ಬಗ್ಗೆ ತೀವ್ರ ಹೋರಾಟಗಳನ್ನು ನಡೆಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ.
ఇదిగ ಪಕ್ಷದ ಕಾರ್ಯಕರ್ತರು, ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ, ಈ ಅವ್ಯವಹಾರ ತನಿಖೆಯಾಗದೆ ಪಕದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ಬೆದರಿಕೆ ಹಾಕಿದ ಪರಿಣಾಮ, 6 ತಿಂಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಗರಣವನ್ನು ಸಿಐಡಿಗೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ