ರಾಜ್ಯದ ಪರಿಶಿಷ್ಟ ಸಮುದಾಯದ 3 ದಶಕಗಳ ಮೀಸಲಾತಿ ಬೇಡಿಕೆ ಈಡೇರಿಸುವುದರೊಂದಿಗೆ ಬಸವರಾಜ ಬೊಮ್ಮಾಾಯಿ ಸರ್ಕಾರ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ ಎಂದು ದ.ಕ. ಬಿಜೆಪಿ ಜಿಲ್ಲಾಾಧ್ಯಕ್ಷ ಸುದರ್ಶನ ಮೂಡುಬಿದಿರೆ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಎಲ್ಲ ಸರ್ಕಾರಗಳು ಮೀಸಲಾತಿ ಭರವಸೆ ನೀಡಿದ್ದರೂ ಈಡೇರಿಸಿಲ್ಲ. ಇದೀಗ ಬಿಜೆಪಿ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ರಾಜ್ಯದ ಜನತೆ ಸ್ವಾಗತಿಸಿದ್ದಾರೆ ಎಂದರು. ಲಂಬಾಣಿ ಸಮುದಾಯದ ಹಲವು ವರ್ಷಗಳ ಬೇಡಿಕೆಯಂತೆ ರಾಜ್ಯದ 52 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ., ಭೂರಹಿತರಿಗೆ ಭೂಮಿಯನ್ನು ನೀಡಲಾಗಿದೆ.
: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು ಚುನಾವಣೆಗೆ ಸನ್ನದ್ಧರಾಗಿದ್ದಾರೆ. ಈಗಾಗಲೇ ಒಂದು ಹಂತದಲ್ಲಿ ಬೂತ್ ಮಟ್ಟದ ಪ್ರಚಾರ ಕಾರ್ಯ ಮುಗಿದಿದೆ. ಎಲ್ಲ ಮೋರ್ಚಾ ಸಭೆಗಳು ಪೂರ್ತಿಯಾಗಿವೆ. ವಿಜಯ ಸಂಕಲ್ಪ ಯಾತ್ರೆಯೂ ಆಗಿದೆ. ಬೂತ್ ಪ್ರಮುಖ್, ಪೇಜ್ ಪ್ರಮುಖ್ ವ್ಯವಸ್ಥೆಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಷ್ಟ್ರೀಯ ವಿಚಾರಧಾರೆ ಮತ್ತು ಪಕ್ಷ ಸಂಘಟನೆಯ ಆಧಾರದಲ್ಲಿ ಈ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ಸುದರ್ಶನ್ ಮೂಡುಬಿದಿರೆ ತಿಳಿಸಿದರು.
ಬಿಜೆಪಿ ಮುಖಂಡರಾದ ಪ್ರತಾಪ್‌ಸಿಂಹ ನಾಯಕ್, ಕಸ್ತೂರಿ ಪಂಜ, ಸುಧೀರ್ ಶೆಟ್ಟಿ ಕಣ್ಣೂರು ಜಗದೀಶ ಶೇಣವ ಮತ್ತಿತರರಿದ್ದರು