ಉಡುಪಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದಿನ ಸರಕಾರದ ಅವಧಿಯ ಟೆಂಡರ್ ಗಳಿಗೆ ತಡೆ ನೀಡಿ ಮೌಕಿಕ ಆದೇಶ ಹೊರಡಿಸಿದ್ದರಿಂದ ಕೇಂದ್ರ ಸರ್ಕಾರ ಪ್ರಯೋಜಿತ ಯೋಜನೆಗಳ ಕಾಮಗಾರಿಯು ಸ್ಥಗಿತಗೊಂಡಿದೆ ಹೀಗಾಗಿ ಜಲಜೀವನ್ ಮಿಷನ್ ಮುಂತಾದ ಕೇಂದ್ರ ಸರ್ಕಾರದ ಯೋಜನೆಗಳನ್ನು ಈ ಆದೇಶದಿಂದ ಹೊರಗೆ ಇಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಟೆಂಡರ್ ತಡೆಹಿಡಿದ ಕಾರಣ ಆಗುತ್ತಿರುವ ತೊಂದರೆಗಳ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದರು
ಆಂಧ್ರ ಸರ್ಕಾರ ಹಲವು ಉಚಿತ ಯೋಜನೆ ಕೊಟ್ಟಿತ್ತು ಈಗ ಅಲ್ಲಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ ಆಂಧ್ರಪ್ರದೇಶ ಈಗ ಮುಳುಗುವ ಪರಿಸ್ಥಿತಿ ಬಂದಿದೆ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಎಲ್ಲಿಂದ ಒದಗಿಸುತ್ತಾರೆ ಎಂಬ ಬಗ್ಗೆ ಸಿದ್ದರಾಮಯ್ಯ ವರದಿ ಕೊಡಬೇಕು ಎಂದರು
ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.