ಉಡುಪಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಜನ ವಿರೋಧಿ ನಿಲುವುಗಳನ್ನು ವಿರೋಧಿಸಿ ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ಸೆಪ್ಟೆಂಬರ್ 08 ರಂದು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿರುವ “ಬೃಹತ್ ಪ್ರತಿಭಟನೆಯ” ಪೂರ್ವಭಾವಿಯಾಗಿ ದಿನಾಂಕ 05-09-2023 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ “ಬೃಹತ್ ಪ್ರತಿಭಟನೆಯ ಕರಪತ್ರವನ್ನು” ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಗುರ್ಮೆ, ಉಪಾಧ್ಯಕ್ಷರಾದ ಪದ್ಮನಾಭ ಹೆಗ್ಡೆ, ಸದಸ್ಯರಾದ ಲತಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾದ ಗುರುನಂದನ್ ಹೆಗ್ಡೆ, ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್ ಉಪಸ್ಥಿತರಿದ್ದರು