Home » ಕರ್ನಾಟಕಕ್ಕೆ ಅನ್ಯಾಯ : ಸಿದ್ದು
 

ಕರ್ನಾಟಕಕ್ಕೆ ಅನ್ಯಾಯ : ಸಿದ್ದು

ದೆಹಲಿಯಲ್ಲಿ ಪ್ರತಿಭಟನೆ

by Kundapur Xpress
Spread the love

ನವದೆಹಲಿ : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1 ಲಕ್ಷ 87 ಸಾವಿರ ಕೋಟಿ ರೂಪಾಯಿ ನಷ್ಟ ಆಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ ತೆರಿಗೆ ಪಾಲು ಅನುದಾನ ಹಂಚಿಕೆ ಬರ ಪರಿಹಾರ ನೀಡುವಲ್ಲಿ ಮಲತಾಯಿ ಧೋರಣೆ ಸೇರಿದಂತೆ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ನಿರಂತರ ಅನ್ಯಾಯ ಖಂಡಿಸಿ ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಬುಧವಾರ ರಾಜ್ಯ ಸರ್ಕಾರದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಸಂಗ್ರಹ ಮಾಡಿಕೊಡುವ ರಾಜ್ಯ ಕರ್ನಾಟಕ, ಹೀಗಿದ್ದೂ, ನಮಗೆ ಯಾಕೆ ಈ ತಾರತಮ್ಯ ಎಂದು ಪ್ರಶ್ನಿಸಿದರು.

   

Related Articles

error: Content is protected !!