Home » ರಾಜ್ಯದಲ್ಲಿ ಹಿಟ್ಲರ್ ಮಾದರಿಯ ಆಡಳಿತ
 

ರಾಜ್ಯದಲ್ಲಿ ಹಿಟ್ಲರ್ ಮಾದರಿಯ ಆಡಳಿತ

ಕುಯಿಲಾಡಿ ಸುರೇಶ್ ನಾಯಕ್

by Kundapur Xpress
Spread the love

ಉಡುಪಿ : ಜನತೆಗೆ ಆಮಿಷವನ್ನು ಒಡ್ಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಗ್ಯಾರಂಟಿಗಳನ್ನು ಮರೆತು ಜನರ ಗಮನವನ್ನು ಬೇರೆಡೆಗೆ ಒಯ್ಯಲು ವಿವಿಧ ಜನ ವಿರೋಧಿ, ಸಂವಿಧಾನ ವಿರೋಧಿ ಕಾರ್ಯಗಳಲ್ಲಿ ತೊಡಗಿದೆ. ಇದರ ಭಾಗವಾಗಿ ವಿಧಾನಸಭೆಯಲ್ಲಿ ಉಪ ಸಭಾಪತಿಯವರ ಎದುರು ಪೇಪರ್ ಹರಿದು ಎಸೆದ ಕಾರಣಕ್ಕೆ ಸ್ಪೀಕರ್ ರವರು ಸರ್ವಾಧಿಕಾರಿ ಧೋರಣೆ ತಳೆದು ಬಿಜೆಪಿಯ 10 ಮಂದಿ ಶಾಸಕರನ್ನು ಅಸಾಂವಿಧಾನಿಕ ರೀತಿಯಲ್ಲಿ ಸದನದಿಂದ ಅಮಾನತುಗೊಳಿಸಿರುವುದು ಆತುರದ ನಿರ್ಧಾರದ ಅತ್ಯಂತ ಹೇಯ ಕೃತ್ಯವಾಗಿದೆ. ಈ ವಿಚಾರದಲ್ಲೂ ದಲಿತ ಕಾರ್ಡ್ ಬಳಕೆ ಮಾಡುತ್ತಿರುವ ಕಾಂಗ್ರೆಸ್ ಎಲ್ಲದರಲ್ಲೂ ಜಾತಿ, ಧರ್ಮ ಎಂದು ಜನತೆಯನ್ನು ವಿಭಜಿಸುವ ಕಾರ್ಯದಲ್ಲಿ ತೊಡಗಿರುವುದು ನಾಚಿಕೆಗೇಡು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು

ಅವರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸಂವಿಧಾನ ವಿರೋಧಿ, ಜನ ವಿರೋಧಿ ನೀತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದ ಬಳಿ ನಡೆದ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಭಯೋತ್ಪಾದಕರನ್ನು ‘ದೆ ಆರ್ ಮೈ ಬ್ರದರ್ಸ್’ ಎನ್ನುವ ಕಾಂಗ್ರೆಸ್, ಬೆಂಗಳೂರಿನ ಬಂಧಿತ ಭಯೋತ್ಪಾದಕರ ಪ್ರಕರಣವನ್ನು ಹಗುರವಾಗಿ ಪರಿಗಣಿಸಿದ್ದು, ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಪ್ರಕರಣದ ತನಿಖೆಯನ್ನು ಎನ್ಐಎ ಗೆ ವಹಿಸಬೇಕು. ಈ ಎಲ್ಲ ವಿಚಾರಗಳನ್ನು ಗಮನಿಸಿದಾಗ ಪ್ರಾಯಶಃ 2013-2018ರ ಅವಧಿಯಲ್ಲಿ ನಡೆದ ಸಿ.ಎಂ. ಸಿದ್ಧರಾಮಯ್ಯನವರ ನಿರಂಕುಶ ಆಡಳಿತದ ಭೀಕರತೆ ಪುನರಾವರ್ತನೆಗೊಳ್ಳುವ ಎಲ್ಲ ಲಕ್ಷಣಗಳು ಕಾಣುತ್ತಿದ್ದು, ರಾಜ್ಯದ ಜನತೆ ಇದರ ಫಲವನ್ನು ಉಣ್ಣಬೇಕಾಗುತ್ತದೆ ಎಂದರು.

 

   

Related Articles

error: Content is protected !!