ಉಡುಪಿ : ಉಡುಪಿಯ ನಗರದ ಖಾಸಗಿ ಕಾಲೇಜಿನಲ್ಲಿ ‘ಜಿಹಾದಿ ಮನಸ್ಥಿತಿಯ ಮೂರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣ’ದ ವಿರುದ್ಧ ಇಂದು ಜುಲೈ 28, ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ “ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ” ನಡೆಯಲಿದೆ.
ಇಂದು ಜುಲೈ 28, ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿಯಿಂದ ಹೊರಡಲಿರುವ ‘ಬೃಹತ್ ಪ್ರತಿಭಟನಾ ಮೆರವಣಿಗೆ’ಯು ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಛೇರಿಯ ಬಳಿ ಸಮಾಗಮಗೊಂಡು, ‘ಪ್ರತಿಭಟನಾ ಸಭೆ’ ನಡೆಸಿ ‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸುವ ಮನವಿ’ಯನ್ನು ಸಲ್ಲಿಸಲಾಗುವುದು