222
ಉಡುಪಿ :ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಕ್ಯಾಮೆರಾ ಮೂಲಕ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿದ ಹೇಯ ಕೃತ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಶುಕ್ರವಾರದಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಿಂದ ಬನ್ನಂಜೆ ಎಸ್.ಪಿ ಆಫೀಸ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು
ಮೆರವಣಿಗೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾಜಿ ಶಾಸಕ ರಘುಪತಿ ಭಟ್ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಗುರುರಾಜ್ ಗಂಟಿಹೊಳೆ ಮಹಿಳಾ ಮೋರ್ಚಾದ ವೀಣಾ ಶೆಟ್ಟಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮುಂತಾದವರು ಭಾಗವಹಿಸಿದರು ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸುವಂತೆ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು


