Home » ಧರಣಿ ಸ್ಥಳಕ್ಕೆ-ಕುಂದಾಪುರ ಶಾಸಕ ಭೇಟಿ
 

ಧರಣಿ ಸ್ಥಳಕ್ಕೆ-ಕುಂದಾಪುರ ಶಾಸಕ ಭೇಟಿ

by Kundapur Xpress
Spread the love

ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸ್ಥಳದ ಸಮೀಪ ಭೋವಿ ಜನಾಂಗದವರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದು ಆ ಸ್ಥಳಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ ಅವರೊಂದಿಗೆ ಚರ್ಚೆ ನಡೆಸಿ ಅವರ ಅರ್ಹ ಬೇಡಿಕೆಯನ್ನು ಸರಕಾರದ ಗಮನಕ್ಕೆ ತರುವುದಾಗಿ ಶಾಸಕರು ತಿಳಿಸಿದರು.
ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟೆ ಹೊಳೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಹಾಗೂ ಉಡುಪಿ ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭೋವಿ ಸಮಾಜದ ಪ್ರಮುಖರು ಉಪಸ್ಥಿತರಿದ್ದರು

 

Related Articles

error: Content is protected !!