ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನು ದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಈಗಾಗಲೇ ನಿಗದಿಯಾಗಿರುವಂತೆ ಮಾ.11ರಿಂದ 18ರವರೆಗೆ ಮೌಲ್ಯಾಂಕನ ಪರೀಕ್ಷೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ -2(ಎಸ್ಎ-2) ನಡೆಸುವುದರ ಸಂಬಂಧ ಹೊರಡಿಸಿದ್ದ ಇಲಾಖೆಯ ಅಧಿಸೂಚನೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಆ ಆದೇಶವನ್ನು ವಿಭಾಗೀಯ ಪೀಠ ರದ್ದುಪಡಿಸಿರುವುದರಿಂದ ಪರೀಕ್ಷೆ ಪೂರ್ವ ನಿಗದಿಯಂತೆ ನಡೆಯಲಿದೆ ಎಂದು ಇಲಾಖೆ ಆಯುಕ್ತರು ತಿಳಿಸಿದ್ದಾರೆ.