ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆ-2 ಏ. 29 ರಿಂದ ಮೇ 16 ರ ವರೆಗೆ ಜಿಲ್ಲೆಯ ಒಟ್ಟು ಮೂರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು, ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ಹಾಗೂ ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತ ಗೊಳಿಸದಂತೆ ನಿಗಧಿಪಡಿಸಲಾದ ಎಲ್ಲಾ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು. ನಿಷೇಧಿತ ಪ್ರದೇಶವೆಂದು ಘೋಷಿಸಿ 1973ರ ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.