98
ಉಡುಪಿ : ಮಹಿಳೆಯರು ಒಂದೇ ಕ್ಷೇತ್ರಕ್ಕೆ ಸೀಮಿತರಾಗಿರದೆ, ಆರ್ಥಿಕ, ರಾಜಕೀಯ, ತಂತ್ರಜ್ಞಾನ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತನ್ನದೇ ಆದ ಛಾಪು ಮೂಡಿಸಿದ್ದಾರೆ. ನಮ್ಮ ಜೀವನ ಮಟ್ಟವನ್ನು ಸುಧಾರಿಸುವ ಕುರಿತು ಪ್ರಗತಿ ಚಿಂತನೆ ಮಾಡಿದಾಗ ಯಶಸ್ಸು ಸಾಧ್ಯವಾಗುತ್ತದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಪರ್ಯಾಯ ಪೀಠಾಧಿಕಾರಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಇಲ್ಲಿನ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ. ಕೆ. ಸ್ವಾಗತಿಸಿ, ದೀಪ ಹಾಗೂ ಶಾರದಾ ನಿರೂಪಿಸಿ, ವಸಂತಿ ಕೊರಡ್ಕರ್ ವಂದಿಸಿದರು.

