Home » ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲೂ ಗೆಲುವು
 

ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲೂ ಗೆಲುವು

: ಆರ್.ಅಶೋಕ್

by Kundapur Xpress
Spread the love

ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲು ಶ್ರಮಿಸುವುದಾಗಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಮಾಜಿ ಸಚಿವ ಆರ್.ಅಶೋಕ್ ಅವರು ತಿಳಿಸಿದರು.

ನಿನ್ನೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ನಮಗಿಂದು ಮೋದಿಜೀ, ನಡ್ಡಾಜೀ, ಅಮಿತ್ ಶಾ ಜೀ ಅವರಂಥ ಪ್ರಬಲ ನಾಯಕತ್ವ ಸಿಕ್ಕಿದೆ. ಕಳೆದ 6 ತಿಂಗಳ ಕಾಂಗ್ರೆಸ್ ದುರಾಡಳಿತ, ಭ್ರಷ್ಟಾಚಾರ, ಸ್ವತಃ ಮುಖ್ಯಮಂತ್ರಿಗಳ ಮಗ ವರ್ಗಾವಣೆ ದಂಧೆಯಲ್ಲಿ ಪಾಲ್ಗೊಂಡಿದ್ದನ್ನು ಕಂಡು ಜನರೂ ಬೇಸತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ, ಕನಕಪುರ ಸೇರಿ ರಾಜ್ಯದ 28 ಕ್ಕೆ 28 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ. ಕಳೆದ ಬಾರಿಯ 25 ಸ್ಥಾನಗಳ ಬದಲು 28 ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

ಕಳೆದ ವಿಧಾನಸಭೆಯಲ್ಲಿ 66 ಶಾಸಕರು ಕೂಡ ವಿರೋಧ ಪಕ್ಷದ ನಾಯಕರಿಲ್ಲದೆ ಸಮರ್ಥ ವಿಪಕ್ಷವಾಗಿ ಕೆಲಸ ಮಾಡಿದ್ದೇವೆ. ಪ್ರಬಲವಾದ ಹೋರಾಟವನ್ನು ಬಿಜೆಪಿ ಮಾಡಿದೆ ಎಂದರು. ಎಲ್ಲ ಹಿರಿಯರ ಕಿರಿಯರ ಸಹಕಾರ, ವಿಶ್ವಾಸದೊಂದಿಗೆ ಹೋರಾಟ ರೂಪಿಸುವುದಾಗಿ ತಿಳಿಸಿದರು.

ಕಾಂಗ್ರೆಸ್ ದುರಾಡಳಿತದ ವಿರುದ್ಧ ನಿರಂತರ ಹೋರಾಟ ಮಾಡುವುದಾಗಿ ಅವರು ಪ್ರಕಟಿಸಿದರು. ಪಕ್ಷ ನನಗೆ ಸ್ಥಾನ ಕೊಟ್ಟಿದೆ. ಎಲ್ಲ ಶಾಸಕರನ್ನು ಪ್ರೀತಿ, ವಿಶ್ವಾಸದಿಂದ ಒಯ್ಯುವುದಾಗಿ ತಿಳಿಸಿದರು. ಯಡಿಯೂರಪ್ಪನವರ ಮಾರ್ಗದರ್ಶನದಡಿ ಮೋದಿಜಿ ಅವರ ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಮಾದರಿಯಲ್ಲಿ ಮುನ್ನಡೆಯುವುದಾಗಿ ಅವರು ತಿಳಿಸಿದ್ದಾರೆ

   

Related Articles

error: Content is protected !!