ಬೆಂಗಳೂರು : ಬೆಂಗಳೂರು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಬಗ್ಗೆ ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಸರ್ಕಾರದ ವಿರುದ್ಧ ಶೇ.40 ಕಮಿಷನ್ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಕಮಿಷನ್ ಕೊಡುವವರಿಗೆ ಬಿಲ್ ಪಾವತಿಸಲಾಗುತ್ತಿದೆ ಎಂದಿದ್ದಾರೆ. ಸರ್ಕಾರ ಬಂದ ಆರಂಭದಿಂದಲೇ ಕಮಿಷನ್ ದಂಧೆ ಹಾಗೂ ಲೂಟಿ ನಡೆಯುತ್ತಿದೆ ಎಂದು ತಿಳಿಸಿದ್ದೆವು ಲಂಚ ಕೊಡುತ್ತಿರುವವರ ಸಂಘದವರೇ ಹೇಳಿರುವುದರಿಂದ ಇದು ಲೂಟಿಕೋರ ಸರ್ಕಾರವಾಗಿದೆ ಎಂದು ಆರ್.ಅಶೋಕ್ ಆರೋಪಿಸಿದರು.