ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರ ಪರಿಹಾರ ಬಿಡುಗಡೆ ಕುರಿತು ಖಂಡಿತವಾಗಿ ನ್ಯಾಯಾಲಯದ ಮೊರೆ ಹೋಗಲಿ ಹಾಗೂ ಛೀಮಾರಿ ಹಾಕಿಸಿಕೊಂಡು ಬರಲೆಂದು ನಾನು ಆಶಿಸುತ್ತೇನೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ ವ್ಯಂಗ್ಯವಾಡಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ ಕಾರಣದ ಇತಿಹಾಸದಲ್ಲೇ ದಾಖಲೆಯ ಪ್ರಮಾಣದ ಬರ ಪರಿಹಾರವನ್ನು ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ನೀಡಿದೆ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಹಿಂದೆ ಯಾವುದೇ ನೆರವು ನೀಡಲಿಲ್ಲ. ಅದನ್ನು ಹೇಳುವ ಯೋಗ್ಯತೆ ಕೂಡ ರಾಜ್ಯ ಕಾಂಗ್ರೆಸ್ ನಾಯಕರಿಗಿಲ್ಲ. ಹಿಂದೆ ಬರ-ನೆರೆ ಪರಿಹಾರ ಕೇಳಿದ್ದಾಗ ಯುಪಿಎ ಸರ್ಕಾರ ಶೇ.8-9 ಮಾತ್ರ ಪರಿಹಾರ ನೀಡಿದೆ ಎಂದರು.