ಇನ್ನಂಜೆ : ಯುವಕ ಮಂಡಲ (ರಿ.) ಇನ್ನಂಜೆ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಇನ್ನಂಜೆ ಒಕ್ಕೂಟ, ಇನ್ನಂಜೆ ಗ್ರಾಮ ಪಂಚಾಯತ್, ಇನ್ನಂಜೆ ಯುವತಿ ಮಂಡಲ (ರಿ.) ಇನ್ನಂಜೆ ಬಿಲ್ಲವ ಸೇವಾ ಸಂಘ ಇನ್ನಂಜೆ, ನಿಸರ್ಗ ಫ್ರೆಂಡ್ಸ್ (ರಿ.) ಪಾದೆಕೆರೆ ರೋಟರಿ ಸಮುದಾಯ ದಳ ಇನ್ನಂಜೆ, ಇನ್ನಂಜೆ ಮಹಿಳಾ ಮಂಡಳಿ (ರಿ.) ಇನ್ನಂಜೆ ಇವರ ಸಹಕಾರದೊಂದಿಗೆ ಶ್ರೀ ಕೃಷ್ಣ ಲೀಲೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ “ಮೊಸರು ಕುಡಿಕೆ ಕ್ರೀಡಾಕೂಟ – 2025 ಮುದ್ದುಕೃಷ್ಣ ವೇಷ ಸ್ಪರ್ಧೆ” ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಉಡುಪಿ ಜಿಲ್ಲೆ ಇದರ ನಿರ್ದೇಶಕರಾದ ನಾಗರಾಜ್ ಶೆಟ್ಟಿ, ಎಸ್.ವಿ.ಯಚ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ರಾಜೇಂದ್ರ ಪ್ರಭು, ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ಅಧ್ಯಕ್ಷರಾದ ವಜ್ರೇಶ್ ಅಚಾರ್ಯ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

