Home » ನವದುರ್ಗಾ ಲೇಖನ ಯಜ್ಞದ ಕುರಿತು ಮಾಹಿತಿ
 

ನವದುರ್ಗಾ ಲೇಖನ ಯಜ್ಞದ ಕುರಿತು ಮಾಹಿತಿ

by Kundapur Xpress
Spread the love

ಕಾಪು : ಅತ್ಯದ್ಭುತವಾದ ರೀತಿಯಲ್ಲಿ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ಪ್ರತಿಷ್ಠಾ- ಬ್ರಹ್ಮಕಲಶೋತ್ಸವಕ್ಕೆ ಪೂರ್ವಬಾವಿಯಾಗಿ ಎಂ ಆರ್ ಜಿ ಗ್ರೂಪ್ ಬೆಂಗಳೂರು ಇದರ ಆಡಳಿತ ನಿರ್ದೇಶಕರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಇವರ ನೇತೃತ್ವದಲ್ಲಿ ಹಾಗೂ ಮಾಣಿಲ ಮೋಹನ್ ದಾಸ್ ಪರಮಹಂಸ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಬೆಂಗಳೂರಿನ ಗಾಯತ್ರಿ ವಿಹಾರ ಗೇಟ್ ನಂ 4, ಪ್ಯಾಲೇಸ್ ಗ್ರೌಂಡ್  ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪ ಕಾರ್ಯಕ್ರಮದಲ್ಲಿ ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಭಾಗವಹಿಸಿ ನವದುರ್ಗಾ ಲೇಖನ ಯಜ್ಞದ ಕುರಿತು ಸಂಪೂರ್ಣ ವಿವರಣೆ ನೀಡಿ ಈ ಯಜ್ಞದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ ವಾಸುದೇವ ಶೆಟ್ಟಿ, ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ, ಉಪಾಧ್ಯಕ್ಷರಾದ ದಿವಾಕರ್ ಶೆಟ್ಟಿ, ಮನೋಹರ್ ಶೆಟ್ಟಿ, ಸ್ವರ್ಣ ಸಮರ್ಪಣಾ ಸಮಿತಿ ಅಧ್ಯಕ್ಷರಾದ ರವಿ ಸುಂದರ್ ಶೆಟ್ಟಿ, ಆರ್ಥಿಕ ಸಮಿತಿ ಮುಖ್ಯ ಸಂಚಾಲಕರಾದ ಉದಯ್ ಸುಂದರ್ ಶೆಟ್ಟಿ, ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್,ಲೇಖನ ಯಜ್ಞ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಯೋಗಿಶ್ ವಿ ಶೆಟ್ಟಿ ಬಾಲಾಜಿ, ಬೆಂಗಳೂರು ಸಮಿತಿ ಅಧ್ಯಕ್ಷರಾದ ಉಪೇಂದ್ರ ಶೆಟ್ಟಿ, ಸುಗ್ಗಿ ಸುಧಾಕರ್ ಶೆಟ್ಟಿ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ‌ ಯಜ್ಞ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

   

Related Articles

error: Content is protected !!