ಉಡುಪಿ :ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಭಾವಿ ಸಭೆ ಇಂದು ದಿನಾಂಕ 13-04-2023 ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು ಸಭೆಯಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ ಪಾಲ್ ಸುವರ್ಣ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಮಾಡಬೇಕಾದ ಪೂರ್ವ ತಯಾರಿಯ ಬಗ್ಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ಕುತ್ಯಾರು ನವೀನ್ ಶೆಟ್ಟಿ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.