ಕರ್ನಾಟಕದ ವಿಧಾನಸಭಾ ಚುನಾವಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿಯಾಗಿ “ಬಹಿರಂಗ ಚುನಾವಣಾ ಪ್ರಚಾರ ಸಭೆ” ದಿನಾಂಕ 30-04-2023 ರಂದು ಕೊಕ್ಕರ್ಣೆ ಭಾಗದಲ್ಲಿ ನಡೆಯಿತು.
ಸಭೆಯಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದರ ಜೊತೆಗೆ ಕಳೆದ 5 ವರ್ಷಗಳಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ ಪಾಲ್ ಸುವರ್ಣ ಅವರಿಗೆ ಮತ ನೀಡಿ ಅತ್ಯಂತ ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ವಿನಂತಿಸಿದರು.
ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ಅವರ ಕಾರ್ಯ ವೈಖರಿ, ಜನಪರ ಕಾಳಜಿ ಹಾಗೂ ಕ್ಷೇತ್ರದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹರ್ಷ ಕುಮಾರ್ ಶೆಟ್ಟಿ, ರಾಘವೇಂದ್ರ ಶೆಟ್ಟಿ, ರತ್ನಾಕರ ಶೆಟ್ಟಿ, ನಿತಿನ್ ಜೋಗಿ, ರಾಜಾ ಸೇರಿಗಾರ್, ಮೊಹನ್ ದಾಸ್ ಶೆಟ್ಟಿ, ಸುರೇಶ್, ಮಣಿಕಂಠ, ಸೋಮನಾಥ, ಕಾರ್ತಿಕ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ ಪಾಲ್ ಸುವರ್ಣ ಅವರು ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುಪ್ರಸಾದ್ ಶೆಟ್ಟಿ, ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮಿ, ರಾಜ್ಯ ಬಿಜೆಪಿ ಎಸ್. ಟಿ ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಬಿ.ಎನ್ ಶಂಕರ್ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಗಳಾದ ಗಣೇಶ್ ಮೊಗೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ, ಪಕ್ಷದ ಮುಖಂಡರಾದ ಬಿರ್ತಿ ರಾಜೇಶ್ ಶೆಟ್ಟಿ, ಧನಂಜಯ ಅಮೀನ್, ಹರಿಮಕ್ಕಿ ರತ್ನಾಕರ ಶೆಟ್ಟಿ, ಚೇರ್ಕಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮನೋಜ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು