Home ಕರಾವಳಿ ಸುದ್ದಿಕೋಟದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಕೋಟದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಹೊಳೆ ಹೂಳೆತ್ತುವಂತೆ ಆಗ್ರಹ

by Kundapur Xpress

ಕೋಟ : ತೆಕ್ಕಟ್ಟೆ ಗಿಳಿಯಾರು, ಚಿತ್ರಪಾಡಿ ಕಾರ್ಕಡದವರೆಗೆ ಹೊಳೆ ಹೂಳಿನ ಸಮಸ್ಯೆಯಿಂದ ಕೃತಕ ನೆರೆ ಸೃಷ್ಟಿಯಾಗಿದ್ದು ರೈತರು ಬೆಳೆದ ಕೃಷಿ ಕೊಳೆಯುತ್ತಿದೆ. ಇದಕ್ಕೆ ಶಾಶ್ವತ ಪರಿಹಾರಕ್ಕಾಗಿ ಹೊಳೆಯ ಹೂಳೆತ್ತಬೇಕು ಎಂದು ಆಗ್ರಹಿಸಿ ರೈತಧ್ವನಿ ಸಂಘಟನೆ ನೇತೃತ್ವದಲ್ಲಿ ಇಂದು ಕೋಟ ಹಿರೇಮಹಾಲಿಂಗೇಶ್ವರ ದೇಗುಲದ ರಥಬೀದಿಯಲ್ಲಿ ಧರಣಿ ಹಾಗೂ ಉಪವಾಸ ಸತ್ಯಾಗ್ರಹ ನಡೆಯಲಿದೆ.

ಹಲವು ಬಾರಿ ಮನವಿ
ಸಮಸ್ಯೆ ಬಗ್ಗೆ ಈ ಹಿಂದೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಪರಿಹಾರ ಸಿಗದಿರುವುದರಿಂದ ಈ ಸಾಂಕೇತಿಕ ಉಪವಾಸ ಸತ್ಯಾಗೃಹ ಮಾಡಲು ತೀರ್ಮಾನಿಸಿದ್ದೇವೆ. ಒಂದು ವೇಳೆ ನಮ್ಮ ಬೇಡಿಕೆ ಫಲಿಸದಿದ್ದರೆ ಮುಂದೆ ಉಗ್ರ ಹೋರಾಟವನ್ನು ಮಾಡಲಿದ್ದೇವೆ ಎಂದು ರೈತಧ್ವನಿ ಸಂಘದ ಅಧ್ಯಕ್ಷ ಮಣೂರು ಜಯರಾಮ ಶೆಟ್ಟಿ ತಿಳಿಸಿದ್ದಾರೆ.

Related Articles