Home » 495 ಫಲಾನುಭವಿಗಳಿಗೆ ಸಾಧನ ಪರಿಕರ
 

495 ಫಲಾನುಭವಿಗಳಿಗೆ ಸಾಧನ ಪರಿಕರ

by Kundapur Xpress
Spread the love

ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ಸಮೀಕ್ಷೆ ನಡೆಸಿ ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣೆಗಳನ್ನು ಅಲಿಂಕೊ ಮೂಲಕ ಸಂಪೂರ್ಣವಾಗಿ ಉಚಿತವಾಗಿ ವಿತರಿಸಲಾಗುವುದು ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ನುಡಿದರು ಅವರು ಭಾನುವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಉಡುಪಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವಯೋಶ್ರೀ ಯೋಜನೆ ಅಡಿ ಹಿರಿಯ ನಾಗರಿಕರಿಗೆ ಸಾಧನ ಸರಕಾರಣೆಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು

ಗ್ರಾಮೀಣ ಪ್ರದೇಶದಲ್ಲಿ ಪಿಡಿಓಗಳು ಮತ್ತು ಪಂಚಾಯತ್ ಕಾರ್ಯದರ್ಶಿಗಳ ಮೂಲಕ ಮನೆ ಮನೆ ಸಮೀಕ್ಷೆ ನಡೆಸಿ ವಿಕಲಚೇತನರು ದಿವ್ಯಾಂಗರು ಮತ್ತು ಹಿರಿಯ ನಾಗರಿಕರ ನಿಕರ ಅಂಕಿ ಅಂಶಗಳನ್ನು ಸಂಗ್ರಹಿಸಿ ಅಗತ್ಯವಿರುವ ಸಾಧನ ಸಲಕರಣೆಗಳ ಬಗ್ಗೆ ಅಧಿಕಾರಿಗಳು ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಶೋಭಾ ಕರಂದ್ಲಾಜೆ ಅವರು ತಿಳಿಸಿದರು

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಎಚ್‌ ಆಪರ ಜಿಲ್ಲಾಧಿಕಾರಿ ಮಮತಾದೇವಿ ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಗಿರಿರಾಜ್‌ ಪ್ರಕಾಶ್‌ ಮೀನಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ಯಾಮಲಾ ಜಿಲ್ಲಾ ನಿರೂಪಣಾಧಿಕಾರಿ ಕೃಷ್ಣಪ್ಪ ಜಿಲ್ಲಾ ವಿಕಲಚೇತನ ಕಲ್ಯಾಣ ಅಧಿಕಾರಿ ರಾಮದಾಸ್ ಮತ್ತಿತರರು ಉಪಸ್ಥಿತರಿದ್ದರು ಅಲಿಂಕೊ ಸಂಸ್ಥೆಯ ಅಶೋಕ್ ಬಾಲ್ ಸ್ವಾಗತಿಸಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಕಾರ್ಯಕ್ರಮ ನಿರೂಪಿಸಿದರು

   

Related Articles

error: Content is protected !!