Home » 41 ಸಾವಿರ ಜತೆ ಶಾಲಾ ಸಮವಸ್ತ್ರ ವಿತರಣೆ
 

41 ಸಾವಿರ ಜತೆ ಶಾಲಾ ಸಮವಸ್ತ್ರ ವಿತರಣೆ

by Kundapur Xpress
Spread the love

ಬೈಂದೂರು : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಆಶ್ರಯದಲ್ಲಿ ಬೈಂದೂರು ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ 350 ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 41 ಸಾವಿರ ಜತೆ ಶಾಲಾ ಸಮವಸ್ತ್ರ ವಿತರಣೆ ಜುಲೈ 6ರಂದು ಬೆಳಗ್ಗೆ 11ಗಂಟೆಗೆ ಬೈಂದೂರಿನ ಜೆಎನ್‌ಆರ್ ಸಭಾಂಗಣದಲ್ಲಿ ಸಮವಸ್ತ್ರವನ್ನು ಸಾಂಕೇತಿಕವಾಗಿ ವಿತರಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಿದ್ದಾರೆ. ಸಂಸದ ಕೋಟಿ ಶ್ರೀನಿವಾಸ ಪೂಜಾರಿ ಶುಭಾಶಂಸನೆಗೈಯಲಿದ್ದಾರೆ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಸಂಸದ ಕ್ಯಾ.ಬೃಜೇಶ್ ಚೌಟ, ಶಾಸಕರಾಗಿ ಎ. ಕಿರಣ್ ಕುಮಾರ್ ಕೊಡ್ಲಿ, ಯಶಪಾಲ್ ಸುವರ್ಣ, ಸಮೃದ್ಧ ಜನಸೇವಾ ಚಾರಿಟೆಬಲ್‌ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ಗಣಪತಿ ಮ ಎಂ.ಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದರು.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಉಪಾಧ್ಯಕ್ಷ ಎಚ್.ನಾಗರಾಜ ಶೆಟ್ಟಿ, ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ, ಅಮಾಸೆಬೈಲು ಗ್ರಾಪಂ ಸದಸ್ಯ ಕೃಷ್ಣ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು

   

Related Articles

error: Content is protected !!