ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇದೇ ಮೊದಲ ಬಾರಿಗೆ ರಾಜ್ಯ ಸಭೆ ಪ್ರವೇಶಿಸಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಬುಧವಾರ ಅವರು ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋನಿಯಾ ರಾಜಸ್ಥಾನದಿಂದ ಸ್ಪರ್ಧಿಸಬಹುದು ಎಂದು ಮೂಲಗಳು ಹೇಳಿವೆ. 77ರ ಹರೆಯದ ಸೋನಿಯಾ ಗಾಂಧಿ ಹಾಲಿ ಉತ್ತರ ಪ್ರದೇಶದ ರಾಯ್ ಬರೇಲಿ ಸಂಸದೆ. ಆದರೆ ವಯಸ್ಸಿನ ಕಾರಣ ಈ ಲೋಕಸಭೆ ಚುನಾವಣೆಗೆ ಸ್ಪರ್ಧಿಸದೇ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ಮೂಲಗಳು ಹೇಳಿವೆ