ಕುಂದಾಪುರ : ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗವು ಕರ್ನಾಟಕದ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಿಜೆಪಿ ನಿಯೋಗವು ಮಾಜಿ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು ಮನವಿ ಸ್ವೀಕರಿಸಿ ಸ್ಪಂದಿಸಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ.
ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನಿಮ್ಮ ಮನವಿಯಂತೆ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ಭರವಸೆ ನೀಡಿದರು